ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆಗೆ ಸೈ ಎಂದ ಹೈಕೋರ್ಟ್

ಬೆಂಗಳೂರು: ಸರ್ಕಾರದ ಭೂಮಿ ಕಬಳಿಕೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂಡ ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ-2011 ಸಂವಿಧಾನ ಬದ್ಧವಾಗಿದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸುಮಾರು 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಅವರಿಂದ್ ಕುಮಾರ್ ಮತ್ತು ನ್ಯಾ.ಬಿ.ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

‘ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರ ಭೂಕಬಳಿಕೆ ವಿಶೇಷ ನ್ಯಾಯಾಲಯ ಇದೆ. ಈ ಕಾಯ್ದೆಯಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕಾದರೆ ರೈತರು ಬೆಂಗಳೂರಿಗೆ ಬರಬೇಕಾದ ಪರಿಸ್ಥಿತಿ ಇದೆ. ಇದರಿಂದ ಬಡ ರೈತರು ಕಷ್ಟ ಅನುಭವಿಸುವಂತಾಗಿದೆ. ಅಲ್ಲದೇ ಈ ಕಾಯ್ದೆಯಡಿ 7,800 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 4,400 ಪ್ರಕರಣಗಳ ವಿಚಾರಣೆ ಇನ್ನೂ ಬಾಕಿ ಇವೆ. ಹೀಗಾಗಿ ಹೆಚ್ಚುವರಿ ನ್ಯಾಯಾಲಯಗಳನ್ನು ಜಿಲ್ಲಾ ಮಟ್ಟದಲ್ಲಿ ತೆರೆಯುವುದು ಸೂಕ್ತ’ ಎಂದು ಪೀಠ ಅಭಿಪ್ರಾಯಪಟ್ಟಿದೆ.

Edited By : Nagaraj Tulugeri
PublicNext

PublicNext

20/01/2021 01:42 pm

Cinque Terre

93.21 K

Cinque Terre

0

ಸಂಬಂಧಿತ ಸುದ್ದಿ