ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮತ್ತಿಬ್ಬರು ನೇಮಕ.

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಶಾಸಕ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.

ಕಾಂಗ್ರೆಸ್ ನಲ್ಲಿ ಕಳೆದ 40 ವರ್ಷಗಳಿಂದ ಸಕ್ರಿಯವಾಗಿ ತೊಡಗಿಕೊಂಡು ಸಂಘಟನೆಯಲ್ಲಿ ತಮ್ಮದೇ ಆದ ಶಕ್ತಿಯನ್ನು ಹೊಂದಿರುವ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ರಾಮಲಿಂಗ ರೆಡ್ಡಿ ಅವರಿಗೆ ಕೊನೆಗೂ ಎಐಸಿಸಿ, ಅವರ ಅನುಭವವನ್ನು ಪರಿಗಣಿಸಿ ಮಹತ್ವದ ಜವಾಬ್ದಾರಿ ನೀಡಿದೆ.

ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳನ್ನು ಕೂಡ ಜೊತೆಯಲ್ಲಿಟ್ಟುಕೊಳ್ಳುವ ನಿಟ್ಟಿನಲ್ಲಿ ಮಾಜಿ ಸಂಸದ ಧ್ರುವನಾರಾಯಣ ಅವರು ಕೂಡ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತರಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಪ್ರಭಾವ ಹೊಂದಿರುವ ಅವರು ಶಾಸಕರಾಗಿ, ಎರಡು ಬಾರಿ ಸಂಸದರಾಗಿ ದೆಹಲಿ ಹಾಗೂ ಕರ್ನಾಟಕದಲ್ಲಿ ಪ್ರಭಾವ ಹೊಂದಿದ್ದಾರೆ.

ಈಗಾಗಲೇ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್ ಅವರನ್ನು ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ಸಾರಥ್ಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದರೆ ಈಗ ಮತ್ತಿಬ್ಬರು ಕಾರ್ಯಾಧ್ಯಕ್ಷರ ನೇಮಕವಾಗಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ.

ಎಲ್ಲಾ ಸಮುದಾಯಗಳನ್ನು ಓಲೈಸುವ ನಿಟ್ಟಿನಲ್ಲಿ ಕಾಂಗ್ರೆಸ್ ತನ್ನ ದಾಳ ಉರುಳಿಸಿದ್ದು, ಮುಂದಿನ ರಾಜ್ಯ ಸಾವ್ರರ್ತಿಕ ಚುನಾವಣೆಗೆ ತಯಾರಿ ಆರಂಭದ ಮುನ್ನೋಟ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

Edited By : Nirmala Aralikatti
PublicNext

PublicNext

20/01/2021 05:44 pm

Cinque Terre

79.89 K

Cinque Terre

6

ಸಂಬಂಧಿತ ಸುದ್ದಿ