ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಪುಟ ರಚನೆ, ಖಾತೆ ಹಂಚಿಕೆ ಸುಲಭದ ವಿಚಾರವಲ್ಲ: ಬಿಎಸ್‌ವೈ

ಬೆಂಗಳೂರು: ಸಂಪುಟ ರಚನೆ, ಖಾತೆ ಹಂಚಿಕೆ ಸುಲಭದ ವಿಚಾರವಲ್ಲ. ಸ್ವಲ್ಪ ಸಣ್ಣಪುಟ್ಟ ಅಸಮಾಧಾನ ಇರಬಹುದು. ಅವರೆಲ್ಲರನ್ನೂ ಕರೆದು ನಾನು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಖಾತೆ ಬದಲಾವಣೆ ಅಸಮಾಧಾನ ಸ್ಫೋಟ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧುಸ್ವಾಮಿ, ಗೋಪಾಲಯ್ಯ ಎಲ್ಲರೂ ಸಮಾಧಾನವಾಗಿದ್ದಾರೆ. ಯಾರಿಗೂ ಅಸಮಾಧಾನವಿಲ್ಲ. ಅವರೆಲ್ಲರನ್ನೂ ಕರೆದು ನಾನು ಮಾತನಾಡುತ್ತೇನೆ. ಅವರು ಈಗ ನೀಡಿದ ಖಾತೆಯಲ್ಲಿ ಸ್ವಲ್ಪ ದಿವಸ ಕೆಲಸ ಮಾಡಲಿ. ಸರಿ ಹೋಗಲಿಲ್ಲ ಅಂದರೆ ಆಮೇಲೆ ಉತ್ತಮ ಖಾತೆ ನೀಡೋಣ ಎಂದು ತಿಳಿಸಿದರು.

Edited By : Vijay Kumar
PublicNext

PublicNext

21/01/2021 05:40 pm

Cinque Terre

43.26 K

Cinque Terre

0

ಸಂಬಂಧಿತ ಸುದ್ದಿ