ಕಲಬುರ್ಗಿ: ನೂತನ ಮಂತ್ರಿಗಳಿಗೆ ಖಾತೆ ಹಂಚಿಕೆ ಮತ್ತು ಹತ್ತು ಜನ ಸಚಿವರ ಖಾತೆ ಬದಲಾವಣೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ. ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರ ಅಸಮಾಧಾನವನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ. ಮುಖ್ಯಮಂತ್ರಿಗಳಿಗೆ ಸಾಕಷ್ಟು ಆಡಳಿತ ಅನುಭವ ಇದೆ. ಅಸಮಾಧಾನಿತ ಶಾಸಕರೊಂದಿಗೆ ಚರ್ಚೆ ಮಾಡಿ ಎಲ್ಲವನ್ನೂ ಸರಿಪಡಿಸುತ್ತಾರೆ. ಯಡಿಯೂರಪ್ಪ ಅವರ ಮೂರ್ನಾಲ್ಕು ದಶಕಗಳ ರಾಜಕೀಯ ಹೋರಾಟ ಹಾಗೂ ಬಿಜೆಪಿ ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಪ್ರಸ್ತುತ ಸರ್ಕಾರದಲ್ಲಿ ಯಾರದ್ದೂ ಹಸ್ತಕ್ಷೇಪ ಇಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿದರು.
PublicNext
21/01/2021 07:35 pm