ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಉಲ್ಟಾ ಹೊಡೆದ ರೇಣುಕಾಚಾರ್ಯ

ಬೆಂಗಳೂರು: ಮಾಧ್ಯಮಗಳಲ್ಲಿನಾನು ಶಾಸಕರ ಸಭೆ ನಡೆಸಿದ್ದಾಗಿ ವರದಿಯಾಗಿದೆ. ನಾನು ಯಾವುದೇ ಶಾಸಕರ ಸಭೆ ಮಾಡಿಲ್ಲ. ಸಚಿವ ಸ್ಥಾನ ಹಂಚಿಕೆ ಕೇವಲ ಎರಡು ಜಿಲ್ಲೆಗೆ ಮಾತ್ರ ಕೇಂದ್ರೀಕೃತವಾಗಿದೆ. ಇದು ಸರಿಯಲ್ಲ ಎಂದಷ್ಟೇ ಹೇಳಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಂಕರ್ ಮುನೇನಕೊಪ್ಪ ಜೊತೆ ಸಭೆ ನಡೆದಿದೆ ಅಂತ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಅವರು ಕ್ಷೇತ್ರದಲ್ಲಿದ್ದಾರೆ. ನಾನು ದೆಹಲಿಗೆ ಹೋಗಿದ್ದು ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚೆಗೆ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ ಭೇಟಿ ಮಾಡಿದ್ದೆ. ಸಿಎಂ ಕೂಡ ಎರಡು-ಮೂರು ಬಾರಿ ಕರೆ ಮಾಡಿ ಮಾತನಾಡಿದ್ದಾರೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಯಾವ ಅಸಮಾಧಾನವೂ ಇಲ್ಲ. ಹಲವು ಜಿಲ್ಲೆಗಳಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ. ಸಚಿವ ಸ್ಥಾನ ಹಂಚಿಕೆ ಕೇವಲ ಎರಡು ಜಿಲ್ಲೆಗೆ ಮಾತ್ರ ಕೇಂದ್ರೀಕೃತವಾಗಿದೆ ಎಂದ ರೇಣುಕಾಚಾರ್ಯ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

Edited By : Nagaraj Tulugeri
PublicNext

PublicNext

22/01/2021 03:44 pm

Cinque Terre

59.19 K

Cinque Terre

7

ಸಂಬಂಧಿತ ಸುದ್ದಿ