ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಡಿಕೆಶಿಗೆ ಧಮ್ ಇದ್ರೆ ಸಿದ್ದರಾಮಯ್ಯ ಮೇಲೆ ಕ್ರಮ ಕೈಗೊಳ್ಳಲಿ

ಧಾರವಾಡ: ಡಿ.ಕೆ.ಶಿವಕುಮಾರ ಅವರು ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಅವರ ಪಕ್ಷದ ಪರಿಸ್ಥಿತಿ ನೋಡಿ ಗಾಬರಿಯಾಗಿದ್ದಾರೆ. ಪಕ್ಷದಲ್ಲಿದ್ದವರು ಯಾವ ಪಕ್ಷಕ್ಕೆ ಹೋಗುತ್ತಾರೋ ಎಲ್ಲಿ ಉಳಿಯುತ್ತಾರೋ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶದಲ್ಲಿ ನಿರ್ಣಾಮ ಆಗುತ್ತಿದೆ. ಮುಳುಗಿ ಹೋಗುತ್ತಿರುವ ಹಡಗಿನಲ್ಲಿ ಯಾರು ಉಳಿಯುತ್ತಾರೆ? ಹೀಗಾಗಿ ಆ ಪಕ್ಷದಲ್ಲಿನ ಕಾರ್ಯಕರ್ತರು ಚೆಲ್ಲಾಪಿಲ್ಲಿಯಾಗಿ ಹೋಗುತ್ತಿದ್ದಾರೆ. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಪಕ್ಷದ ಅಧ್ಯಕ್ಷರಾಗಿರುವ ಡಿಕೆಶಿ ಅವರ ಮೇಲೆ ಧಮ್ ಇದ್ರೆ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ನಲ್ಲಿ ನಾನೇ ಸಿಎಂ ಎಂದು ಇಬ್ಬರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಕಾಂಗ್ರೆಸ್ ನವರು ಸಿಎಂ ಆಗೋದು ಈ ಜನ್ಮದಲ್ಲಿ ಸಾಧ್ಯವಿಲ್ಲ ಎಂದರು.

Edited By :
PublicNext

PublicNext

23/01/2021 12:03 pm

Cinque Terre

91.32 K

Cinque Terre

9