ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮವಿದ್ದರೆ ಸಕ್ರಮ ಮಾಡಿಸಿ : ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ: BSY

ಮೈಸೂರು: ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ, ಕಾಮಗಾರಿಗಳು ಅಪಾರ ಪ್ರಮಾಣದಲ್ಲಿ ನಡೆಯುತ್ತಿವೆ. ಹೀಗಾಗಿ ಕಲ್ಲು ಗಣಿಗಾರಿಕೆ ಅಗತ್ಯ. ಆದರೆ ಅನುಮತಿ ಪಡೆದು ಗಣಿಗಾರಿಕೆ ಮಾಡಿಲು ಅಭ್ಯಂತರ ಇಲ್ಲ. ಆದರೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ. ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸ್ಪೋಟದಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಮನೆಗಳಿಗೂ ಹಾನಿಯಾಗಿದೆ ಅಂತ ಗೊತ್ತಾಗಿದೆನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

23/01/2021 12:36 pm

Cinque Terre

59.26 K

Cinque Terre

3

ಸಂಬಂಧಿತ ಸುದ್ದಿ