ಬೆಂಗಳೂರು: ವ್ಯವಸ್ಥಿತ ಸಂಚು ರೂಪಿಸಿ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ''ಸೌಮ್ಯಾ ರೆಡ್ಡಿ ಅವರು ರಕ್ಷಣೆಗಾಗಿ ತಮ್ಮನ್ನು ಎಳೆದಾಡುತ್ತಿದ್ದ ಪೊಲೀಸರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಎಲ್ಲ ಮಹಿಳಾ ನಾಯಕಿಯರನ್ನು ಪೊಲೀಸರು ಎಳೆದಾಡುತ್ತಿದ್ದನ್ನು ನಾವೇ ನೋಡಿದ್ದೇವೆ. ಅಷ್ಟೇ ಅಲ್ಲದೆ ನಮ್ಮ ಪಕ್ಷದ ಕಾರ್ಯಕರ್ತರ ಮೇಲೂ ಹಲ್ಲೆ ಮಾಡಲಾಗಿದೆ. ಅವರ ಬಟ್ಟೆ ಬಿಚ್ಚಿಸಿ ದೌರ್ಜನ್ಯ ಎಸಗಿದ್ದಾರೆ'' ಎಂದು ದೂರಿದ್ದಾರೆ.
‘ಸೌಮ್ಯಾ ರೆಡ್ಡಿ ಮೇಲೆ ಎಫ್‌ಐಆರ್ ದಾಖಲಿಸಿದ ಪೊಲೀಸರು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ಕೊಟ್ಟು ಗಲಭೆಗೆ ಕಾರಣವಾದಾಗ ಸ್ವಯಂ ಪ್ರೇರಿತ ಪ್ರಕರಣ ಯಾಕೆ ದಾಖಲಿಸಲಿಲ್ಲ. ಅವರ ವಿಚಾರದಲ್ಲಿ ಪೊಲೀಸರು ಹೇಡಿಗಳಂತೆ ವರ್ತಿಸಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
‘ಆರ್.ಆರ್. ನಗರ ಚುನಾವಣೆ ಸಮಯದಲ್ಲಿ ನನ್ನ ಮತ್ತು ಸಿದ್ದರಾಮಯ್ಯ ಅವರ ಮೇಲೆ ಯಾಕೆ ಪ್ರಕರಣ ಹಾಕಲಿಲ್ಲ. ಕೇವಲ ಆ ಹೆಣ್ಣು ಮಗಳ ಮೇಲೆ ಕೇಸ್ ಹಾಕಿದರು. ನೀವು ಬೇಕಾದರೆ ಸಂಪೂರ್ಣ ವಿಡಿಯೋ ನೋಡಿ’ ಎಂದರು.
‘ಸೌಮ್ಯಾ ರೆಡ್ಡಿ ಅವರು ಆಕೆ ಕೆಳಗೆ ಬಿದ್ದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಅವರನ್ನು ಬಂಧಿಸಿದರೂ ನಾವು ಅವರ ಪರ ನಿಲ್ಲುತ್ತೇವೆ. ನಮ್ಮ ಬಳಿಯೂ ಸಾಕ್ಷ್ಯಗಳಿವೆ. ಈ ಕೃತ್ಯದ ಹಿಂದೆ ಸರ್ಕಾರದ ಕೈವಾಡ ಇದೆ'' ಎಂದು ದೂರಿದರು.
PublicNext
23/01/2021 05:26 pm