ಕೋಲ್ಕತ್ತಾ: ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ದಿನವಾದ ಇಂದು ‘ಪರಾಕ್ರಮ ದಿವಸ್’ ಕಾರ್ಯಕ್ರಮವನ್ನು ಕೋಲ್ಕತ್ತಾದಲ್ಲಿ ಆಯೋಜಿಸಲಾಗಿದೆ. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಎದುರೇ ಅಸಮಾಧಾನ ಹೊರ ಹಾಕಿದ್ದಾರೆ.
ಕೇಂದ್ರ ಸರ್ಕಾರವು ಪ್ರಧಾನಿ ಮೋದಿ ಸಮ್ಮುಖದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸಲಾಯಿತು. ಆದರೆ ಈ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು 'ಜೈ ಶ್ರೀರಾಮ್' ಎಂದು ಘೋಷಣೆ ಕೂಗಿದರು. ಇದಕ್ಕೆ ಆಕ್ರೋಶಗೊಂಡ ಮಮತಾ, 'ಇದು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಇದೊಂದು ಸರ್ಕಾರಿ ಕಾರ್ಯಕ್ರಮ. ಇದಕ್ಕೊಂದು ಘನತೆ ಇರಬೇಕು. ಆಹ್ವಾನಿಸುವುದು ಮತ್ತು ಅವಮಾನಿಸುವುದು ಯಾರಿಗೂ ಇಷ್ಟವಾಗುವುದಿಲ್ಲ. ನಾನು ಮಾತನಾಡುವುದಿಲ್ಲ. ಜೈ ಬಂಗಾಳ, ಜೈ ಹಿಂದ್' ಎಂದು ತಮ್ಮ ಭಾಷಣವನ್ನು ನಿಲ್ಲಿಸಿದರು.
ಮಮತಾ ಬ್ಯಾನರ್ಜಿ ಅವರ ಈ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.
PublicNext
23/01/2021 06:58 pm