ನವದೆಹಲಿ: ದೇಶದಲ್ಲೇ ಅತ್ಯುತ್ತಮ ಕೆಲಸ ಮಾಡುವ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸತತ ನಾಲ್ಕನೇ ಬಾರಿ ಮೊದಲ ಸ್ಥಾನ ಪಡೆದಿದ್ದಾರೆ.
ಇಂಡಿಯಾ ಟುಡೇ ಸಮೂಹ- ಕಾರ್ವಿ ಇನ್‍ಸೈಟ್ಸ್ ಮೂಡ್ ಆಫ್ ದಿ ನೇಷನ್(ಎಂಒಟಿಎನ್) ಜನವರಿಯಲ್ಲಿ ನಡೆಸಿದ ಸಮೀಕ್ಷೆ ಬಳಿಕ ಈ ಮಾಹಿತಿ ಬಹಿರಂಗವಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇಶದ ಶೇ.25 ಮತಗಳನ್ನು ಪಡೆಯುವ ಮೂಲಕ ದೇಶದಲ್ಲೇ ಬೆಸ್ಟ್ ಪರ್ಫಾರ್ಮಿಂಗ್ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಟ್ಟು ಶೇ.14ರಷ್ಟು ಮತಗಳನ್ನು ಪಡೆಯುವ ಮೂಲಕ 2ನೇ ಸ್ಥಾನ ಪಡೆದಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನ ಪಡೆದಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶೇ.6ರಷ್ಟು ಮತಗಳನ್ನು ಪಡೆಯುವ ಮೂಲಕ 4ನೇ ಸ್ಥಾನ ಪಡೆದಿದ್ದಾರೆ.
PublicNext
23/01/2021 11:08 pm