ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನೆ ಮುಂದೆ ಹೈಡ್ರಾಮಾ ನಡೆದಿದೆ.
ಕಾರು ನಿಲ್ಲಿಸುವ ವಿಚಾರವಾಗಿ ಸಿದ್ದರಾಮಯ್ಯ ಅವರ ಎದುರು ಮನೆ ನಿವಾಸಿಗಳು ಮತ್ತು ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಎದುರು ಮನೆಯವರ ಮೇಲೆ ಹಲ್ಲೆ ನಡೆಸಿದ್ದು, ಕೊರಳು ಪಟ್ಟಿ ಹಿಡಿದು ಎರಡೂ ಕಡೆಯವರು ಹೊಡೆದಾಡಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಕಾಂಗ್ರೆಸ್ ಕಾರ್ಯಕರ್ತರು ಮನೆಗೆ ಆಗಮಿಸಿದ್ದರು. ಈ ವೇಳೆ ಘಟನೆ ನಡೆದಿದ್ದು, ಮಾಹಿತಿ ಸಿಗುತ್ತಿದ್ದಂತೆ ಹೈಗ್ರೌಂಡ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
PublicNext
24/01/2021 07:51 am