ನವದೆಹಲಿ: ಮೇವು ಹಗರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಆರ್‌ಜೆಡಿ ಮುಖ್ಯಸ್ಥ, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್‌ಗೆ ಏರ್ ಲಿಫ್ಟ್ ಮೂಲಕ ಕರೆದೊಯ್ಯಲಾಗಿದೆ.
ಲಾಲು ಪ್ರಸಾದ್ ಯಾದವ್ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಶುಕ್ರವಾರ ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಏರ್‌ಲಿಫ್ಟ್ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, ಮತ್ತು ಮಾಜಿ ಸಚಿವರಾದ ತೇಜ್ ಪ್ರತಾಪ್ ಯಾದವ್ ಸೇರಿ ಹಲವು ನಾಯಕರು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.
PublicNext
24/01/2021 10:13 am