ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಗಣಿಗಾರಿಕೆ ನಡೆದ್ರೆ ಅಧಿಕಾರಿಗಳೇ ಹೊಣೆ: ಬಿಎಸ್‌ವೈ ಖಡಕ್ ಎಚ್ಚರಿಕೆ

ಶಿವಮೊಗ್ಗ: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದರೂ ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ''ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಕ್ರಮ ಗಣಿಗಾರಿಕೆಗಳು ಕೂಡಲೇ ನಿಲ್ಲಬೇಕು. ಅರ್ಜಿ ಹಾಕಿ ನಂತರ ಪರವಾನಗಿ ಪಡೆಯಬೇಕು. ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅನುಮತಿ ನೀಡಬೇಕು. ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟದ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಗಣಿಗಾರಿಕೆಯಿಂದ ಕೆಆರ್ ಎಸ್ ಜಲಾಶಯಕ್ಕೆ ಸಮಸ್ಯೆ ಎದುರಾಗಲಿದೆ. ಈಗಾಗಲೇ ಹಲವು ಬಾರಿ ಗಣಿಗಾರಿಕೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Edited By : Vijay Kumar
PublicNext

PublicNext

24/01/2021 12:19 pm

Cinque Terre

71.92 K

Cinque Terre

3

ಸಂಬಂಧಿತ ಸುದ್ದಿ