ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಇಂದು ನಿಗದಿಪಡಿಸಿದ್ದ ಎಫ್‌ಡಿಎ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮುನ್ನವೇ ಬಹಿರಂಗಗೊಂಡಿರುವ ವಿಚಾರ ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ರಾತ್ರಿಯೇ ಮಾಹಿತಿ ಪಡೆದಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥರ ಬಂಧನವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ಹುದ್ದೆಯಿಂದ ವಜಾಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಈಗಾಗಲೇ 9 ಜನರನ್ನು ಬಂಧಿಸಿದ್ದಾರೆ. ಈಗಾಗಲೇ ಬಹಳಷ್ಟು ಪರೀಕ್ಷಾ ಅಭ್ಯರ್ಥಿಗಳಿಗೆ ಉತ್ತರ ಪ್ರತಿಗಳನ್ನು ನೀಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಹೀಗಾಗಿ, ಆರೋಪಿಗಳ ಸಹಚರರು ಸೇರಿದಂತೆ ಪರೀಕ್ಷಾ ಅಭ್ಯರ್ಥಿಗಳಿಗೂ ಕೂಡ ಸಿಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ.
PublicNext
24/01/2021 12:32 pm