ಬಳ್ಳಾರಿ: ಶೀಘ್ರವೇ ರಾಜ್ಯದಲ್ಲೂ ಲವ್ ಜಿಹಾದ್ ತಡೆ ಕಾನೂನು ಜಾರಿಗೆ ತಂದು ಮಹಿಳೆಯರಿಗೆ ರಕ್ಷಣೆ ಒದಗಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಇಂದು ಆಯೋಜಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಗೆ ಬಂದಿದೆ. ಅದೇ ರೀತಿ ಲವ್ ಜಿಹಾದ್ ಕಾನೂನು ಕೂಡ ಜಾರಿಗೆ ತರಲಾಗುವುದು. ಇದು ಜಾತ್ಯಾತೀತ ರಾಷ್ಟ್ರ. ಡಾ.ಬಿ.ಆರ್. ಅಂಬೇಡ್ಕರ್ ರಚಿಸಿರುವ ಸಂವಿಧಾನ ಒಪ್ಪಿಕೊಂಡಿದ್ದೇವೆ. ಆದರೆ ಹಿಂದೂ ಸಂಸ್ಕೃತಿಯ ದೇಶ, ಹಿಂದೂ ದೇಶ ಎಂದು ತಿಳಿಸಿದರು.
PublicNext
24/01/2021 03:49 pm