ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಕಳೆದ 14-15ತಿಂಗಳಲ್ಲಿ ಅಭಿವೃದ್ಧಿಗೆ ಪೂರಕವಾದ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತರದೇ ಬರೀ ಹಣ ಲೂಟಿ ಮಾಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದ್ದಾರೆ.
ಆನೆಕಲ್ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಸಂಬಂಧ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಈ ವೇಳೆ ಬಿಜೆಪಿ ಸರ್ಕಾರದ ಆಡಳಿತ ವೈಖರಿ ವಿರುದ್ಧ ಕಿಡಿಕಾರಿದರು. ಕೊರೊನಾ ಸಂಕಷ್ಟದಿಂದ ನಿರೀಕ್ಷೆಗೆ ತಕ್ಕಂತೆ ಆದಾಯ ಬರದೇ ಇದ್ದರೂ ಕೂಡ ಬಂದಿರುವ ಆದಾಯವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಲು ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಖಜಾನೆಯಲ್ಲಿನ ಹಣವನ್ನು ದುರ್ಬಳಕೆ ಮಾಡಿಕೊಂಡು ಸ್ವೇಚ್ಛಾಚಾರವಾಗಿ ಬೇಕು ಬೇಕಾದಂತಹ ಕಾರ್ಯಕ್ರಮವನ್ನು ಘೋಷಣೆ ಮಾಡುವ ಮೂಲಕ, ಹಣವನ್ನೂ ಲೂಟಿ ಮಾಡುವುದನ್ನೆ ಆದ್ಯತೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
PublicNext
24/01/2021 04:40 pm