ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಎಂಈಎಸ್ ಸಂಘಟನೆ ನಿಷೇಧಿಸಬೇಕು ಹಾಗೂ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದು ಮಾಡುವಂತೆ ಒತ್ತಾಯಿಸಿ ಜನವರಿ 30ರಂದು ರಾಜ್ಯದಲ್ಲಿ ರೈಲು ಬಂದ್ ಮಾಡಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ರೈಲು ನಿಲ್ದಾಣದಲ್ಲಿ ಮಾತನಾಡಿದ ಕಪ್ಪುಬಟ್ಟೆ ಧರಿಸಿ ಮಾತನಾಡಿದ ವಾಟಾಳ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ಧಟತನ ತೋರುತ್ತಿದ್ದಾರೆ. ಹೀಗಿರುವಾವ ರಾಜ್ಯ ಸರ್ಕಾರ ಗಡಿ ವಿಚಾರವಾಗಿ ಆಸಕ್ತಿ ತೋರುತ್ತಿಲ್ಲ. ಬೆಳಗಾವಿಯ ರಾಜಕಾರಣಿಗಳು ಕೋಮಾದಲ್ಲಿದ್ದಾರೆ. ಅವರೆಲ್ಲ ಎಮ್ಈಎಸ್ ಏಜೆಂಟರಾಗಿದ್ದಾರೆ. ಹೀಗಾಗಿ ನಮ್ಮ ಹೋರಾಟ ಅನಿವಾರ್ಯ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
PublicNext
25/01/2021 05:03 pm