ಬೆಂಗಳೂರು: ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ'' ಎಂದು ಪ್ರಶ್ನಿಸಿದ್ದಾರೆ.
PublicNext
27/01/2021 04:49 pm