ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ: ಮೋದಿಗೆ ಸಿದ್ದು ಟಾಂಗ್

ಬೆಂಗಳೂರು: ಕೃಷಿ ಕಾನೂನು ವಿರೋಧಿಸಿ ನಿನ್ನೆ ದೆಹಲಿಯಲ್ಲಿ ನಡೆದ ಘಟನೆ ವಿಚಾರವಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ''ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ರೈತ ವಿರೋಧಿ‌ ಕಾನೂನುಗಳನ್ನು ವಾಪಸ್ ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ'' ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಸ್ ಪಡೆಯಬೇಕಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ''ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ ಮೋದಿ ಅವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತ ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ. ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ಅವುಗಳನ್ನು ವಾಪಸ್‌ ಪಡೆಯುತ್ತಿಲ್ಲ'' ಎಂದು ಆರೋಪಿಸಿದರು.

Edited By : Vijay Kumar
PublicNext

PublicNext

27/01/2021 05:03 pm

Cinque Terre

71.74 K

Cinque Terre

50

ಸಂಬಂಧಿತ ಸುದ್ದಿ