ಬೆಂಗಳೂರು: ನಾಳೆ ಜನವರಿ 28ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. 15ನೇ ವಿಧಾನಸಭೆಯ 9ನೇ ಅಧಿವೇಶನ ಏಳು ದಿನಗಳ ಕಾಲ ನಡೆಯಲಿದೆ. ರಾಜ್ಯಪಾಲರನ್ನು ಭೇಟಿ ಮಾಡಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಹ್ವಾನ ನೀಡಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಹೇಳಿದ್ದಾರೆ.
ವಿಧಾನ ಮಂಡಲ ಅಧಿವೇಶನ ತಯಾರಿ ವೀಕ್ಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಬಾರಿ ಕೋವಿಡ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಸದನ ವೀಕ್ಷಿಸಲು ಅನುಮತಿ ನೀಡಲಾಗಿಲ್ಲ. ಈ ಬಾರಿ ವಿಧಾನಸಭೆಯಲ್ಲಿ ಒಟ್ಟು 11 ವಿಧೇಯಕಗಳು ಮಂಡನೆಯಾಗಲಿದ್ದು, ಸಾಕಷ್ಟು ಮುಂಚಿತವಾಗಿ ವಿಧೇಯಕ ನೀಡಬೇಕು ಎಂದು ಸರ್ಕಾರಕ್ಕೆ ಸ್ಪೀಕರ್ ಸೂಚನೆ ನೀಡಲಾಗಿದೆ. ಆದ್ಯತೆ ಪ್ರಕಾರ ವಿಧೇಯಕಗಳನ್ನು ಚರ್ಚೆಗೆ ಎತ್ತಿಕೊಳ್ಳಲಾಗುವುದು ಎಂದರು.
PublicNext
27/01/2021 05:11 pm