ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ತಾಂಡವ್' ಮೇಲೆ ಕೋರ್ಟ್ ತಾಂಡವ: ಬಂಧನದಿಂದ ರಕ್ಷಣೆಗೆ ನಿರಾಕರಣೆ

ಬೆಂಗಳೂರು: ನಟ ಸೈಫ್ ಅಲಿ ಖಾನ್ ನಟನೆಯ ತಾಂಡವ್ ವೆಬ್ ಸರಣಿಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪದ ಅಡಿ ವೆಬ್ ಸರಣಿ ನಿರ್ದೇಶಕ ಹಾಗೂ ಹಲವರಿಗೆ ಬಂಧನ ಭೀತಿ ಶುರುವಾಗಿದೆ.

ವೆಬ್ ಸರಣಿ ನಿರ್ದೇಶಕ ಅಲಿ ಅಬ್ಬಾಸ್ ಜಾಫರ್ ಹಾಗೂ ಅದನ್ನು ಪ್ರಸಾರ ಮಾಡಿದ ಅಮೆಜಾನ್ ಪ್ರೈಮ್ ಮುಖ್ಯಸ್ಥರ ವಿರುದ್ಧ ಕರ್ನಾಟಕ, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿ ಕೇಸ್ ದಾಖಲಾಗಿವೆ. ಹೀಗಾಗಿ ಬಂಧನದಿಂದ ರಕ್ಷಣೆ ಕೋರಿ ಹಾಗೂ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ನಿರ್ದೇಶಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗೂ ಸಂಬಂಧಪಟ್ಟ ಕೋರ್ಟ್ ಗಳಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

Edited By : Nagaraj Tulugeri
PublicNext

PublicNext

27/01/2021 06:34 pm

Cinque Terre

55.03 K

Cinque Terre

1

ಸಂಬಂಧಿತ ಸುದ್ದಿ