ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ: ಕಾರಣವೇನು?

ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿ ನಿರ್ಮಾಣಕ್ಕೆ ಜಮೀನು ನೀಡಿ ಪರಿಹಾರ ಸಿಗದೇ ಕಂಗಾಲಾದ ಬಡ ರೈತ ಮಹಿಳೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್​ ಎದುರು ಆಕ್ರೋಶ ಹೊರಹಾಕಿದ ಘಟನೆ ಜರುಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ಆಗಮಿಸಿದ ಹಫೀಝಾ ಬಾನು ಎಂಬ ಮಹಿಳೆ, ತನಗೆ ಸೇರಿದ 12 ಎಕರೆ ಜಮೀನು ಪಡೆದು ಜಿಲ್ಲಾಧಿಕಾರಿ ಕಚೇರಿ ನಿರ್ಮಾಣ ಮಾಡಿದ್ದಾರೆ. ಆದರೆ ಪರಿಹಾರ‌ ನೀಡದೆ ಸತಾಯಿಸುತ್ತಿದ್ದಾರೆ ಅಂತಾ ಸಚಿವರ ಎದುರೇ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳು ಜವಳಿ ಪಾರ್ಕ್ ನಿರ್ಮಾಣ ಮಾಡುತ್ತೇವೆ ಎಂದು ಕೃಷಿ ಜಮೀನನ್ನು ಬಳಕೆ ಮಾಡಿಕೊಂಡು ಜಿಲ್ಲಾಧಿಕಾರಿ ಕಚೇರಿ ನಿರ್ಮಾಣ ಮಾಡಿ, ಬಡ ಮಹಿಳೆಗೆ ಪರಿಹಾರ ನೀಡದೆ 20 ವರ್ಷಗಳಿಂದ ಸತಾಯಿಸುತ್ತಿರುವುದನ್ನು ಸಚಿವರ ಗಮನಕ್ಕೆ ತರಲಾಯಿತು. ಸಭೆಯಲ್ಲೇ ಕೆಲ ರೈತ ಹೋರಾಟಗಾರರು ಏರು ಧ್ವನಿಯಲ್ಲೇ ‘ನೀನು ಹಣ ಪಡೆಯುವ ತನಕ ಬಿಡ್ಬೇಡ’ ಎಂದು ಮಹಿಳೆಗೆ ಒತ್ತಾಯಿಸಿದರು.

ಬಳಿಕ ಇದಕ್ಕೆ ಪ್ರತಿಕ್ರಯಿಸಿದ ಸಚಿವ ಜಗದೀಶ್ ಶೆಟ್ಟರ್ ಕೂಡಲೇ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

Edited By : Nagaraj Tulugeri
PublicNext

PublicNext

27/01/2021 08:58 pm

Cinque Terre

118.62 K

Cinque Terre

10

ಸಂಬಂಧಿತ ಸುದ್ದಿ