ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತನ್ನ ಮಗಳ ಮದುವೆಗೆ ಆಹ್ವಾನ ನೀಡಲು ಜಿಲ್ಲೆಯ ಮಠಾಧೀಶರನ್ನು ಭೇಟಿ ಮಾಡಿದ್ದರು.
ಬಾಳೆಹೊನ್ನೂರಿನ ರಂಭಾಪುರಿ ಶ್ರೀ ಡಾ. ಪ್ರಸನ್ನರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶೃಂಗೇರಿಯ ಶ್ರೀ ಶಾರದಾಂಬೆ ದರ್ಶನ ಪಡೆದು ಬಳಿಕ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದು ಮಗಳ ಮದುವೆಗೆ ಬಂದು ಆಶೀರ್ವಾದ ಮಾಡಬೇಕೆಂದು ಡಿ.ಕೆ.ಶಿವಕುಮಾರ್ ಕೇಳಿಕೊಂಡರು.
PublicNext
27/01/2021 10:09 pm