ನವದೆಹಲಿ: ಸಚಿವನಾಗುವ ಕನಸಿನಲ್ಲಿದ್ದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ.
ಎಚ್.ವಿಶ್ವನಾಥ್ ಅವರು ಯಾವುದೇ ಚುನಾವಣೆ ನಡೆಯದೇ ಅವಿರೋಧವಾಗಿ ಪರಿಷತ್ ಮೆಟ್ಟಿಲು ಹತ್ತಿದ ಕಾರಣ ಮಂತ್ರಿ ಸ್ಥಾನ ನೀಡಲು ಬರುವುದಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಹೀಗಾಗಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ವಿಶ್ವನಾಥ್ ಅವರಿಗೆ ಇದೀಗ ಆಘಾತ ಉಂಟಾಗಿದೆ.
ಸುಪ್ರೀಂ ಕೋರ್ಟ್ ವಿಶ್ವನಾಥ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಮೂಲಕ ವಿಶ್ವನಾಥ್ ಅರ್ಜಿ ವಜಾ ಆಗಿದ್ದು, ನಾಮ ನಿರ್ದೇಶಿತರು ಸಚಿವರಾಗಲು ಸಾಧ್ಯವಿಲ್ಲ ಎಂದು ಹೇಳಿದೆ. ಹೀಗಾಗಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ವಿಶ್ವನಾಥ್ ಅವರಿಗೆ ನಿರಾಸೆ ಉಂಟಾಗಿದೆ.
PublicNext
28/01/2021 02:36 pm