ತಿರುವನಂತಪುರಂ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನಿನ ಬಗ್ಗೆ ರೈತರಿಗೆ ಸಂಪೂರ್ಣ ಅರ್ಥವಾದರೆ ದೇಶವೇ ಹೊತ್ತಿ ಉರಿಯುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಕೇರಳದ ತಮ್ಮ ಸಂಸದೀಯ ಕ್ಷೇತ್ರದ ವಯನಾಡಿನ ಕಲ್ಪೆಟ್ಟಾದಲ್ಲಿದ್ದ ಇಂದು ನಡೆದ ಯುಡಿಎಫ್ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರದ ಕೃಷಿ ಕಾನೂನು ರೈತರ ಮೇಲಿನ ಇತ್ತೀಚಿನ ಮಾರಕ ದಾಳಿ. ಹೀಗಾಗಿ ಇದನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ತನ್ನ ಕೇಂದ್ರ ಏಜೆನ್ಸಿಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ)ಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಮೂಲಕ ವಿರೋಧ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳ ಮೇಲೆ ಆಕ್ರಮಣಕಾರಿಯಾಗಿ ಬಳಸುತ್ತಿದೆ. ಆದರೆ ಎಡಪಂಥೀಯ ಕೇರಳದ ಮೇಲೆ ಅಂತಹ ಯಾವುದೇ ಒತ್ತಡವಿಲ್ಲ ಎಂದರು.
PublicNext
28/01/2021 05:23 pm