ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಲು ನಿರ್ಧಾರ: ಸಿದ್ದರಾಮಯ್ಯ

ಬೆಂಗಳೂರು: ವಿಧಾನ ಮಂಡಲದ ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಲು ವಿರೋಧ ಪಕ್ಷ ಕಾಂಗ್ರೆಸ್‌ ನಿರ್ಧರಿಸಿದೆ.

ಗುರುವಾರ ನಡೆದ ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್‌ ಅವರಿಗೂ ಪತ್ರ ಬರೆದಿದ್ದಾರೆ. ಜೊತೆಗೆ ಪತ್ರವನ್ನು ಟ್ವೀಟ್ ಮಾಡಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರ ಸರ್ವಾಧಿಕಾರಿ ಧೋರಣೆಯಿಂದಾಗಿ ಸದನದ ಕಾರ್ಯಕಲಾಪ ಸಲಹಾ ಸಮಿತಿಯು ತನ್ನೆಲ್ಲಾ ಪಾವಿತ್ರ್ಯತೆಯನ್ನು ಕಳೆದುಕೊಂಡು ನಾಮಕಾವಸ್ತೆಗೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಏಕಪಕ್ಷೀಯ ನಡೆಯನ್ನು ಖಂಡಿಸುವ ಸಲುವಾಗಿ ಈ ಸಮಿತಿಯ ಮುಂದಿನ ಸಭೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ರಾಜ್ಯ ಸರ್ಕಾರವು ಸದನದ ಕಾರ್ಯಕಲಾಪಗಳ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಿದ ವಿಷಯಗಳನ್ನು, ವಿಧಾನಗಳನ್ನು ಸಂಪೂರ್ಣ ಉಲ್ಲಂಘಿಸಿ, ಏಕಪಕ್ಷೀಯವಾಗಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ಇದು ಸದನದ ಕಾರ್ಯಕಲಾಪ ಸಲಹಾ ಸಮಿತಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದು ಆರೋಪಿಸಿದ್ದಾರೆ.

Edited By : Vijay Kumar
PublicNext

PublicNext

29/01/2021 08:28 am

Cinque Terre

40.87 K

Cinque Terre

2