ಬೆಂಗಳೂರು: ಪಕ್ಷಕ್ಕೆ ಹಮಾಲಿ ಮಾಡಿದ್ದು ನಾವು. ಆದರೆ ಬೇರೆಯವರು ಅಧಿಕಾರ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಮಂತ್ರಿಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲ ಸಚಿವರು ಎರಡ್ಮೂರು ಖಾತೆಗಳಿಗೆ ಬೇಡಿಕೆ ಇಡುತ್ತಿದ್ದಾರೆ. ಸಚಿವ ಸ್ಥಾನ ಕೊಡುವುದು ಗೌರವಕ್ಕಾಗಿ, ದೊಡ್ಡ ಖಾತೆ ಯಾಕೆ ಬೇಕು? ನಮ್ಮ ಪೂರ್ವಜರು ತೆಂಗಿನಮರ ನೆಟ್ಟಿದ್ದರು. ಈಗ ಬೇರೆಯವರು ಎಳನೀರು ಕುಡಿಯುತ್ತಿದ್ದಾರೆ ಎಂದು ಪರೋಕ್ಷವಾಗಿ ಸಚಿವ ಕೆ.ಸುಧಾಕರ್ ವಿರುದ್ಧ ಕಿಡಿಕಾರಿದರು.
PublicNext
30/01/2021 07:41 am