ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಜನರ ಮೇಲೆಯೇ ಯುದ್ಧ ಘೋಷಿಸಿದ್ದಾರೆ ಎಂದು ಕೇಂದ್ರ ಸಚಿವ ಸ್ಮೃತಿ ಇರಾನಿ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ತಮ್ಮ ರಾಜಕೀಯ ನಿಲುವನ್ನು ಪ್ರಧಾನಿ ನರೇಂದ್ರ ಮೋದಿ ಬೆಂಬಲಿಸದಿದ್ದರೆ ನಗರಗಳು ಸುಟ್ಟು ಹೋಗುತ್ತವೆ ಎಂದಿದ್ದಾರೆ. ಅವರ ಇಂತಹ ಹಿಂಸಾಚಾರದ ಕರೆಗೆ ಯಾರೂ ಬೆಂಬಲ ನೀಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ರಾಹುಲ್ ಗಾಂಧಿ ಅವರು ಜನವರಿ 26ರ ಗಲಭೆಯನ್ನು ಪ್ರತಿ ನಗರದಲ್ಲಿ ಮತ್ತು ಕೊಳೆಗೇರಿಗಳಲ್ಲಿಯೂ ಸಹ ನೋಡುತ್ತಾರೆ ಎಂದಿದ್ದಾರೆ. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಮುಖಂಡರು ಶಾಂತಿಗಾಗಿ ಕರೆ ನೀಡುವ ಬದಲು ಹಿಂಸಾಚಾರವನ್ನು ಬಯಸುತ್ತಿದ್ದಾರೆ ಎಂದು ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದರು.
PublicNext
30/01/2021 08:18 am