ನವದೆಹಲಿ:ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ಮೇಲೆ ಮತ್ತೆ ಗುಡುಗಿದ್ದಾರೆ. ಸಂಸದ ಶಶಿ ತರೂರ್ ಮತ್ತು ಆರು ಪತ್ರಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿರುವುದನ್ನು ವಿರೋಧಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ‘ಆಡಳಿತಾರೂಢ ಬಿಜೆಪಿ ಪಕ್ಷವು ಪ್ರಜಾಪ್ರಭುತ್ವದ ಘನತೆಯನ್ನು ಚೂರು ಚೂರು ಮಾಡಿದೆ’ ಎಂದು ಶನಿವಾರ ಆರೋಪಿಸಿದ್ದಾರೆ.
‘ಜನಪ್ರತಿನಿಧಿಗಳು ಮತ್ತು ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಬೆದರಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯು ಬಲು ಅಪಾಯಕಾರಿಯಾದದ್ದು’ ಎಂದೂ ಅವರು ದೂರಿದ್ದಾರೆ. ‘ಪ್ರಜಾಪ್ರಭುತ್ವವನ್ನು ಗೌರವಿಸುವುದು ಸರ್ಕಾರದ ಅಧಿಕಾರವಷ್ಟೇ ಅಲ್ಲ, ಅದು ಜವಾಬ್ದಾರಿ ಕೂಡಾ ಆಗಿದೆ. ಬೆದರಿಕೆ ತಂತ್ರ ಅನುಸರಿಸುವುದು ಪ್ರಜಾಪ್ರಭುತ್ವಕ್ಕೆ ವಿಷಕಾರಿಯಾಗಿವೆ’ ಎಂದೂ ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
PublicNext
30/01/2021 09:23 pm