ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡದಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ.
ನಗರದ ಗಾಂಧಿವೃತ್ತದಲ್ಲಿ ಸಿಎಂ ಯಡಿಯೂರಪ್ಪ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ ಬೆಂಕಿ ಹಚ್ಚಿದ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಹರಿಹರ ಪಂಚಮಸಾಲಿ ಸಮಾಜದ ಪೀಠಾಧಿಪತಿ ವಚನಾನಂದ ಶ್ರೀ, ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಎದುರಲ್ಲೇ ಬಿಎಸ್ ವೈ ಭಾವ ಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಬೆಂಕಿ ಹಚ್ಚಲಾಯಿತು.
300 ಕಿಲೋಮೀಟರ್ ಪಾದಯಾತ್ರೆ ಮಾಡಿದ್ರೂ ಮೀಸಲಾತಿ ನೀಡುತ್ತಿಲ್ಲ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ ಹೊರ ಹಾಕಿದರಲ್ಲದೇ, ನಮ್ಮ ಸಹನೆ ಮುಗಿದಿದೆ. ಇನ್ನೇನಿದ್ದರೂ ಕ್ರಾಂತಿಕಾರಿ ಹೋರಾಟ ಎಂದು ಎಚ್ಚರಿಕೆ ನೀಡಿದರು.
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಪಂಚಮಸಾಲಿ ಸಮಾಜದ ಮುಖಂಡ ಎಚ್. ಎಸ್. ನಾಗರಾಜ್ ಅವರು ಇಬ್ಬರು ಶ್ರೀಗಳ ಸಮ್ಮುಖದಲ್ಲಿ ಬಿಎಸ್ ವೈ ಭಾವ ಚಿತ್ರಕ್ಕೆ ಬೆಂಕಿ ಹಚ್ಚಿ ಸಿಟ್ಟು ಹೊರಹಾಕಿದರು. ಮೀಸಲಾತಿ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.
PublicNext
30/01/2021 10:03 pm