ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರ ಕರ್ನಾಟಕಕ್ಕೆ ಅನ್ಯಾಯ : ಪ್ರತ್ಯೇಕ ರಾಜ್ಯದ ಕೂಗಿಗೆ ಕೋರೆ ಪರೋಕ್ಷ ಬೆಂಬಲ

ಕಾಗವಾಡ : ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗಿಗೆ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆಯೇ?

ಕಾಗವಾಡದಲ್ಲಿ ಜರುಗಿದ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿ ಭಾಷಣ ಮಾಡಿದ ಅವರು, ಪ್ರತ್ಯೇಕ ರಾಜ್ಯದ ಕೂಗು ಸಮರ್ಥನೀಯ​ವ​ಲ್ಲ. ಆದಾಗ್ಯೂ ಪರಿಸ್ಥಿತಿಗಳು ಆ ಕೂಗಿಗೆ ಪೂರಕವಾಗಿ ಕಾಣುತ್ತಿವೆ ಎಂದು ಹೇಳುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದನ್ನು ನೋಡಿದರೆ ಹೌದೆನಿಸುತ್ತದೆ.

ಎಲ್ಲ ಕ್ಷೇತ್ರಗಳಲ್ಲೂ ಅನ್ಯಾಯವನ್ನು ಸಹಿಸಿಕೊಂಡು ಬಂದ ಉತ್ತರ ಕರ್ನಾಟಕದ ಜನ ಭವಿಷ್ಯದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟರೆ ಆಶ್ಚರ್ಯವಿಲ್ಲ. ಪರಿಸ್ಥಿತಿಗೆ ಪ್ರಾದೇಶಿಕ ಅಸಮತೋಲನ ಕಾರಣವಾಗಿದೆ. ಇದು ಹೋಗಬೇಕು.ಕನ್ನಡ ಸಂಸ್ಕೃತಿ ಇಲಾಖೆ ಅನುದಾನ ಬೆಂಗಳೂರಿನ ಕಲಾವಿದರು ಹಾಗೂ ಸಾಹಿತಿಗಳಿಗೇ ಮೀಸಲಿಟ್ಟಂತೆ ಆಗಿದೆ. ಪ್ರಶಸ್ತಿಗಳೂ ಹಾಗೇ ಆಗಿವೆ. ಅಕಾಡೆಮಿಗಳಲ್ಲಿ ಉತ್ತರ ಕರ್ನಾಟಕದವರಿಗೆ ಆದ್ಯತೆಯೇ ಇಲ್ಲ. ಇದು ಎಲ್ಲ ಕ್ಷೇತ್ರಗಳಲ್ಲೂ ಎದ್ದು ಕಾಣುತ್ತಿದೆ ಬೇಸರ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

31/01/2021 11:02 am

Cinque Terre

75.36 K

Cinque Terre

16