ಬೆಂಗಳೂರು: ಅದೇನೋ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿರುವಂತೆ ಸಿಡಿಯನ್ನು ಕೆಲವರು ಬಳಕೆ ಮಾಡುಕೊಂಡಿರಬಹುದು. ಆದರೆ ನಾನು ಆ ಸಿಡಿಯ ಪಾಲುದಾರ ಅಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿಯಲ್ಲಿ ಅಸಮಾಧಾನ ಕಾಣಿಸಿಕೊಂಡಿದೆ. ಸಚಿವರು ಖಾತೆ ಕ್ಯಾತೆ ಬಿಟ್ಟು ಜನರ ಸಮಸ್ಯೆಗಳ ಕಡೆ ಗಮನ ಕೊಡಬೇಕು ಎಂದು ಒತ್ತಾಯಿಸಿದರು.
ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಸ್ವಾತಂತ್ರ್ಯ ಇರಲಿಲ್ಲ. ನಾನು ಸಿಎಂ ಆದರೂ ಸ್ವತಂತ್ರ ನಿರ್ಣಯ ತೆಗೆದುಕೊಳ್ಳುವ ಹಾಗಿರಲಿಲ್ಲ. ನೀರಾವರಿ ಬಗ್ಗೆ ಹಳೆ ಯೋಜನೆಗಳನ್ನೇ ಮುಂದುವರಿಸಿ ಎಂದು ಸಿದ್ದರಾಮಯ್ಯ ಅವರು ಒತ್ತಡ ಹಾಕಿದ್ದರು. ಇನ್ನೊಂದು ಕಡೆ ಬಿಜೆಪಿಯವರು ರೈತರ ಸಾಲಮನ್ನಾ ಅಂತ ಹೇಳಿ ಅಧಿಕಾರಕ್ಕೆ ಬಂದಿದ್ದೀರಿ ಸಾಲಮನ್ನಾ ಮಾಡದೆ ಅವರಿಗೆ ಟೋಪಿ ಹಾಕುತ್ತೀರಾ ಎಂದು ಟೀಕೆ ಮಾಡಿದ್ದರು. ಇದರ ನಡುವೆ ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್ ತರ ಇದ್ದೆ ಅಂತ ಈಗಾಗಲೇ ಹೇಳಿದ್ದೇನೆ ಎಂದು ತಿಳಿಸಿದರು.
PublicNext
31/01/2021 07:20 pm