ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಇಂದು ಬಜೆಟ್ ಮಂಡನೆ ಮಾಡಲಿದೆ. ಇದಕ್ಕೂ ಮುನ್ನವೇ ಕೇಂದ್ರ ಹಣಕಾಸು ಸಚಿವಾಲಯ ಸಿಹಿ ಸುದ್ದಿ ನೀಡಿದೆ.
2021ರ ಜನವರಿ ತಿಂಗಳಲ್ಲಿ ಬರೋಬ್ಬರಿ 1.19 ಲಕ್ಷ ಕೋಟಿ ರೂ. ದಾಖಲೆ ಮೊತ್ತದ ಜಿಎಸ್ಟಿ ಆದಾಯ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ ಅತ್ಯಧಿಕ ಪ್ರಮಾಣದಲ್ಲಿ ಜಿಎಸ್ಟಿ ಆದಾಯ ಸಂಗ್ರಹವಾಗಿದೆ. ಕಳೆದ ತಿಂಗಳಲ್ಲಿ ಒಟ್ಟು ಜಿಎಸ್ಟಿ ಆದಾಯ 1.15 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿತ್ತು ಎಂದು ಸಚಿವಾಲಯ ಮಾಹಿತಿ ನೀಡಿದೆ.
ಕಳೆದ ನಾಲ್ಕೈದು ತಿಂಗಳಿನಿಂದ 1 ಲಕ್ಷ ಕೋಟಿಗೂ ಅಧಿಕ ಜಿಎಸ್ಟಿ ಸಂಗ್ರಹವಾಗುತ್ತಿದ್ದು, ಕೊರೊನಾ ಬಳಿಕ ದೇಶದ ಆರ್ಥಿಕತೆ ಚೇತರಿಕೆ ಕಾಣುವ ಲಕ್ಷಣ ತೋರುತ್ತಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.
PublicNext
01/02/2021 08:26 am