ನವದೆಹಲಿ: ಚುನಾವಣೆ ಸನಿಹದಲ್ಲಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಭರ್ಜರಿ ಗಿಫ್ಟ್ ನೀಡಿದೆ.
ಹೌದು. ವಿತ್ತ ಸಚಿವೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ರಾಷ್ಟ್ರೀಯ ನಿರ್ಮಾಣ ನಿರ್ಮಾಣಕ್ಕೆ ಅನುದಾನ ಘೋಷಿಸಿದ್ದಾರೆ. ವಿಶೇಷವೆಂದರೆ ಇದು ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ದಕ್ಕಿದೆ.
ತಮಿಳುನಾಡಿನಲ್ಲಿ 3500 ಕಿ.ಮೀ ರಾಷ್ಟ್ರೀಯ ಹೆದ್ದಾರಿ, ಕಾರಿಡಾರ್ ನಿರ್ಮಾಣಕ್ಕೆ 1.03 ಲಕ್ಷ ಕೋಟಿ ರೂ., ಕೇರಳದಲ್ಲಿ 1,100 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 65 ಸಾವಿರ ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳದದಲ್ಲಿ 675 ಕಿ.ಮೀ. ಹೆದ್ದಾರಿಗೆ 25 ಸಾವಿರ ಕೋಟಿ ರೂ. ಹಾಗೂ ಅಸ್ಸಾಂನಲ್ಲಿ 1,300 ಕಿ.ಮೀ. ಹೆದ್ದಾರಿ ನಿರ್ಮಾಣಕ್ಕೆ ಅನುದಾನ ಘೋಷಿಸಲಾಗಿದೆ.
ಈ ಯೋಜನೆಗಳನ್ನು ಪ್ರಕಟಿಸುತ್ತಿದ್ದಂತೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದು ಕೇಂದ್ರ ಬಜೆಟ್ ಅಲ್ಲ ರಾಜ್ಯಗಳ ಚುನಾವಣಾ ಬಜೆಟ್ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ವ್ಯಕ್ತವಾಗಿದೆ.
PublicNext
01/02/2021 01:47 pm