ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿದ ಪ್ರಸಕ್ತ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ದೇಶದ ಎಲ್ಲ ವರ್ಗದ ಜನರನ್ನು ಮುನ್ನಡೆಸುವ ಬಜೆಟ್ ಅಲ್ಲ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್, ಆರೋಗ್ಯ ಮತ್ತು ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಿತ್ತು. ಜತೆಗೆ ರೈತರು, ಮಧ್ಯಮ ಹಾಗೂ ಸಣ್ಣ ಉದ್ಯಮಗಳಲ್ಲಿ ದುಡಿಯುವ ಕಾರ್ಮಿಕರ ಉತ್ತೇಜನಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದಿದ್ದಾರೆ.
ಬಜೆಟ್ ಮಂಡನೆಯಾದ ಬಳಿಕ ಜನರ ಕೈಗೆ ಹಣ ನೀಡುವ ಬದಲು, ಮೋದಿ ಸರ್ಕಾರ ದೇಸ್ಜದ ಆಸ್ತಿಗಳನ್ನು ಬಂಡವಾಳಶಾಹಿಗಳ ಕೈಗೆ ಹಸ್ತಾಂತರಿಸುವ ಯೋಜನೆ ರೂಪಿಸಿದೆ. ದೇಶದ ಆಸ್ತಿಗಳನ್ನು ಸರ್ಕಾರದ ಆಪ್ತ ಬಂಡವಾಳಶಾಹಿಗಳಿಗೆ ಹಸ್ತಾಂತರಿಸುವ ಯೋಜನೆ ರೂಪಿಸಿದೆ ಎಂದು ಆರೋಪಿಸಿದ್ದಾರೆ.
PublicNext
01/02/2021 06:52 pm