ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿದ ಪ್ರಸಕ್ತ ಬಜೆಟ್, ಅರ್ಥ ವ್ಯವಸ್ಥೆಯ ಪುನರುಜ್ಜೀವನ ಜೊತೆಗೆ ರೋಗ ನಿಯಂತ್ರಣಕ್ಕೆ ಆಧಾರವಾಗಿದೆ. ಕೃಷಿಗೆ ಹೆಚ್ಚಿನ ಒತ್ತು ನೀಡಿ ಬಜೆಟ್ ಮಂಡಿಸಿರುವುದು ಶ್ಲಾಘನೀಯ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ 16.50 ಲಕ್ಷ ಕೋಟಿ ರೂ. ಅನುದಾನ ಮೀಸಲಿಟ್ಟು, ಎಪಿಎಂಸಿ ಹಾಗೂ ಎಂಎಸ್ಪಿ ವ್ಯವಸ್ಥೆ ಮುಂದುವರಿಕೆ ಮತ್ತು ಬಲವರ್ಧನೆಗೆ ಒತ್ತು ನೀಡಲಾಗಿದೆ. ಕೃಷಿ ಮಾರುಕಟ್ಟೆಗಳಿಗೆ ಮೂಲಭೂತ ಸೌಕರ್ಯಗಳಿಗಾಗಿ ನಿಧಿ, ಸೂಕ್ಷ್ಮ ನೀರಾವರಿ ಯೋಜನೆಯ ಅನುದಾನವನ್ನು ದುಪ್ಪಟ್ಟುಗೊಳಿಸಿ 22 ಬೆಳೆಗಳಿಗೆ ಮೌಲ್ಯವರ್ಧನೆ ಯೋಜನೆ ಘೋಷಿಸಿದ್ದು, ರೈತರಿಗೆ ಸಾಕಷ್ಟು ನೆರವಾಗಲಿದೆ ಎಂದು ತಿಳಿಸಿದ್ದಾರೆ.
PublicNext
01/02/2021 08:38 pm