ಬೆಂಗಳೂರು: ಪಕ್ಷ ಹಾಗೂ ಸರ್ಕಾರದಲ್ಲಿನ ಅಸಮಾಧಾನಿತರ ವಿಶ್ವಾಸಗಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಔತಣಕೂಟ ಏರ್ಪಡಿಸಿದ್ದಾರೆ.
ವಿಧಾನಸಭೆ ಕಲಾಪ ಮುಗಿದ ನಂತರ ಸಂಜೆ ತಮ್ಮ ನಿವಾಸ ಕಾವೇರಿಯಲ್ಲಿ ಪಕ್ಷದ ಶಾಸಕರಿಗೆ ವಿಶೇಷ ಭೋಜನ ಕೂಟ ಏರ್ಪಡಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಿಎಂ ಈ ಡಿನ್ನರ್ ಪಾರ್ಟಿ ಕೊಡುತ್ತಿದ್ದಾರೆ ಎನ್ನಲಾಗಿದೆ.
ಕೆಲವರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಅಂತ ಅಸಮಾಧಾನಗೊಂಡಿದ್ದಾರೆ. ಇನ್ನು ಕೆಲವರು ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದಾರೆ. ಅಲ್ಲದೇ ಖಾತೆ ಹಂಚಿಕೆ ಬಗ್ಗೆಯೂ ಸಿಎಂ ಮೇಲೆ ಬೇಸರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಔತಣಕೂಟದ ಮೂಲಕ ಎಲ್ಲರನ್ನೂ ಸಮಾಧಾನಗೊಳಿಸಲು ಮುಂದಾಗಿದ್ದಾರೆ. ಅಲ್ಲದೇ ಮುಂದೆ ರಾಜ್ಯ ಬಜೆಟ್ ಇರುವುದರಿಂದ ಎಲ್ಲರನ್ನೂ ಗಣನೆಗೆ ತೆಗೆದುಕೊಳ್ಳಲು ಈ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ತಿಳಿದುಬಂದಿದೆ.
PublicNext
02/02/2021 07:49 am