ಮೈಸೂರು: ನಿಮ್ಮ ತಾತ ಪಂಡಿತ್ ಜವಾಹರ ಲಾಲ್ ನೆಹರು ಅವರ ಚರಿತ್ರೆ ಓದಿ ಅವರಂತೆ ಕೆಲಸ ಮಾಡು. ಇಲ್ಲವೆ ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಬಿಟ್ಟು ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ.
ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಸೋಮವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆ, ಡಾ.ಕೆ.ಎಸ್.ಗೌಡಯ್ಯ ಪ್ರತಿಷ್ಠಾನದ ವತಿಯಿಂದ ‘ಯಶೋಧರಮ್ಮ ದಾಸಪ್ಪ ಒಂದು ನೆನಪು’ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಮನೆಯಿಂದ ಹೊರಗೆ ಬರುವುದೇ ಇಲ್ಲ. ನಿಮ್ಮ ತಾತ ನೆಹರೂ ಅವರ ಚರಿತ್ರೆ ಓದು, ಅವರಂತೆ ಕೆಲಸ ಮಾಡು. ಇಲ್ಲದಿದ್ದರೆ ನಿಮ್ಮ ಕುಟುಂಬ ಬಿಟ್ಟು ಬೇರೆಯವರಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿರಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.
ಇದೇ ವೇಳೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇವೇಗೌಡರು ಆರು ಕೊಟ್ಟರೆ ಅತ್ತೆ ಕಡೆಗೆ ಮೂರು ಕೊಟ್ಟರೆ ಸೊಸೆ ಕಡೆಗೆ ಎಂಬಂತೆ ಆಡುತ್ತಿದ್ದಾರೆ. ಇವರನ್ನು ನಂಬಿದರೆ ಯಾವುದೇ ಹೋರಾಟ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
PublicNext
02/02/2021 09:50 am