ಬೆಂಗಳೂರು: ಇನ್ನುಮುಂದೆ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರು ಮೊಬೈಲ್ ಬಳಕೆ ಮಾಡಲು ನಿಷೇಧ ವಿಧಿಸಲಾಗಿದೆ ಎಂದು ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಘೋಷಿಸಿದ್ದಾರೆ.
ಇಂದಿನ ಕಲಾಪದಲ್ಲಿ ವಿಧಾನಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅವರು ಮೊಬೈಲ್ ಬಳಕೆ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಈ ಮೂಲಕ ''03/06/2011ರಲ್ಲಿ ಸದನದಲ್ಲಿ ಮೊಬೈಲ್ ಬಳಕೆ ಮಾಡಬಾರದು ಎಂದು ಆದೇಶವಾಗಿತ್ತು. ಆದರೆ ಸದನದೊಳಗೆ ಈಗಲೂ ಮೊಬೈಲ್‌ಗಳು ರಿಂಗಣಿಸುತ್ತಿದೆ. ಇದು ಕಡೆಯ ವಾರ್ನಿಂಗ್. ಇನ್ಮುಂದೆ ಸದನದೊಳಗೆ ಮೊಬೈಲ್ ತರುವಂತಿಲ್ಲ. ಒಂದು ವೇಳೆ ತಂದರೆ ಸೂಕ್ತ ಕ್ರಮ ಜರುಗಿಸಲಾಗುವುದು'' ಎಂದು ಸಭಾಪತಿ ತಿಳಿಸಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಅವರು ಮೊಬೈಲ್ನಲ್ಲಿ ಅಶ್ಲೀಲ ದೃಶ್ಯ ವೀಕ್ಷಣೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಭಾಪತಿಗಳು ಮೊಬೈಲ್ ಬಳಕೆ ನಿಷೇಧದ ಕುರಿತು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.
PublicNext
02/02/2021 01:30 pm