ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭ್ರಷ್ಟತೆಗೆ ಇನ್ನೊಂದು ಹೆಸರೇ ಬಿಜೆಪಿ ಸರ್ಕಾರ: ಡಿಕೆಶಿ

ಬೆಂಗಳೂರು: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾತನಾಡಿರುವ ಡಿ.ಕೆ.ಶಿವಕುಮಾರ್, ಕೊರೊನಾ ಹಣವನ್ನೂ ಬಿಜೆಪಿ ಸರ್ಕಾರ ಲೂಟಿ ಮಾಡಿದೆ. ಈಗ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಅತ್ಯಂತ ಕಳಪೆ ಬಜೆಟ್. ರೈತರು, ಕಾರ್ಮಿಕರು, ಸರ್ಕಾರಿ ನೌಕರರು ಸೇರಿ ಎಲ್ಲಾ ವರ್ಗದ ಜನರಿಗೂ ಬಜೆಟ್ ನಿಂದ ತೊಂದರೆಯಾಗಲಿದೆ ಅಂತಾ ಟೀಕಿಸಿದರು.

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಗಗನ ಮುಖಿಯಾಗಿದೆ. ರೈತರು ಈಗಾಗಲೇ ನಡೆಸುತ್ತಿರುವ ಹೋರಾಟಕ್ಕೂ ಕೇಂದ್ರ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ. ಈಗ ಎಲ್ಲಾ ವಸ್ತುಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಈ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಇಂದು ಸಂಜೆಯೊಳಗೆ ಹೋರಾಟದ ರೂಪುರೇಷೆ ಸಿದ್ಧಗೊಳಿಸುತ್ತೇವೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

02/02/2021 03:33 pm

Cinque Terre

48.58 K

Cinque Terre

16

ಸಂಬಂಧಿತ ಸುದ್ದಿ