ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸುಧಾಕರ್

ಹಿರಿಯೂರು: 2023 ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಶ್ರಮ ಹಾಗೂ ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ಅಸ್ತಿತ್ವಕ್ಕೆ ಬರಲಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್‌ ಅಭಿಪ್ರಾಯಪಟ್ಟರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಬ್ಲಾಕ್‌ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ತಾಲೂಕಿನ 33 ಗ್ರಾಪಂಗಳು ಹಾಗೂ ನಗರದ 31 ವಾರ್ಡ್‌ಗಳ ಬೂತ್‌ ಸಮಿತಿ ರಚನೆ ಮತ್ತು ಕಾರ್ಯಕರ್ತರೊಡನೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಡಿ.ಸುಧಾಕರ್, ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಪಕ್ಷಗಳ ದುರಾಡಳಿತಕ್ಕೆ ಜನ ಬೇಸತ್ತು ಹೋಗಿದ್ದು, ಮತ ಹಾಕಿ ಅಧಿಕಾರಕ್ಕೆ ತಂದ ಜನ ಈಗ ತಾವು ಪಶ್ಚಾತ್ಥಾಪ ಪಡುತ್ತಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ದುರಾಡಳಿತದ ವಿರುದ್ಧ ಜನಾದೇಶ ಹೊರಹೊಮ್ಮಲಿದೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

02/02/2021 06:46 pm

Cinque Terre

60.09 K

Cinque Terre

18

ಸಂಬಂಧಿತ ಸುದ್ದಿ