ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರೈತ ಸಂಘಟನೆಗಳು ಕಳೆದ 60 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಲ್ಲಿಯವರೆಗೆ ಅನೇಕ ಸುತ್ತಿನ ಮಾತುಕತೆ, ಟ್ರ್ಯಾಕ್ಟರ್ ಪರೇಡ್ನಂತಹ ಘಟನೆ ನಡೆದಿದ್ದರೂ ಯಾವುದೇ ರೀತಿಯ ಅಂತಿಮ ನಿರ್ಧಾರ ಹೊರಬಿದ್ದಿಲ್ಲ.
ಇದೇ ವಿಚಾರವಾಗಿ ಇದೀಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರೈತರೊಂದಿಗೆ ಯುದ್ಧ ಮಾಡ್ತಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಟ್ವೀಟ್ ಮಾಡಿ ತಮ್ಮ ಆಕ್ರೋಶ ಹೊರಹಾಕಿರುವ ಪ್ರಿಯಾಂಕಾ ಗಾಂಧಿ, ದೆಹಲಿ ಗಡಿಯಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜನೆ ಮಾಡಿರುವ ವಿಡಿಯೋ ಕೂಡ ತಮ್ಮ ಟ್ವೀಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
PublicNext
02/02/2021 07:19 pm