ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು.

ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ‌, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಗಂಡು ಮಕ್ಕಳಿಗೆ ಬೆಳಗಾವಿ ಭಾಗದಲ್ಲಿ ಆದ್ಯತೆಯ ಮೇರೆಗೆ ಸೈನಿಕ ಶಾಲೆ ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ‌ ಮಾಡಿದರು. ಈ ಕುರಿತು ಸನ್ಮಾನ್ಯ ಪ್ರಧಾನಮಂತ್ರಿಗಳಿಗೂ ಪತ್ರ ಬರೆದು ಮನವಿ ಸಲ್ಲಿಸಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

Edited By : Nagaraj Tulugeri
PublicNext

PublicNext

02/02/2021 08:26 pm

Cinque Terre

79.51 K

Cinque Terre

2

ಸಂಬಂಧಿತ ಸುದ್ದಿ