ಮುಂಬೈ: ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ. ಇವಿಎಂ ಜೊತೆಯಲ್ಲೇ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ಆಯೋಜಿಸುವ ಕಾನೂನು ರೂಪಿಸಲು ಮುಂದಾಗಿದೆ.
ಈ ಬಗ್ಗೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ನಾನಾ ಪಟೋಲೆ ಅವರು ಇವಿಎಂ ಸೇರಿದಂತೆ ಬ್ಯಾಲೆಟ್ ಪೇಪರ್ ಚುನಾವಣೆ ನಡೆಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇ ಸರ್ಕಾರದಿಂದ ಕರಡು ಸಿದ್ಧವಾಗಿದ್ದರೆ ಮುಂಬರುವ ಬಜೆಟ್ ಅಧಿವೇಶನದಲ್ಲಿ ಮಂಡಿಸಬಹುದು ಎಂದು ಪಟೋಲೆ ಪ್ರತಿಕ್ರಿಯಿಸಿದ್ದಾರೆ. ಸಂವಿಧಾನದ ಅನುಚ್ಛೇದ 328ರ ಅಡಿ ರಾಜ್ಯದಲ್ಲಿ ಚುನಾವಣೆಗಳನ್ನು ನಡೆಸಲು ಕಾನೂನು ಸಿದ್ಧಪಡಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡಲಾಗಿದೆ. ಈ ಸಂಬಂಧ ಹಲವರ ಜೊತೆಗೆ ಈಗಾಗಲೇ ಸಭೆಗಳನ್ನು ನಡೆಸಲಾಗಿದೆ ಎಂದು ಸ್ಪೀಕರ್ ನಾನಾ ಪಟೋಲೆ ಹೇಳಿದ್ದಾರೆ.
PublicNext
03/02/2021 07:42 pm