ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದ ರಾಂಪುರಕ್ಕೆ ತೆರಳುತ್ತಿದ್ದಾಗ ತಮ್ಮ ಕಾರನ್ನು ಸ್ವಚ್ಛಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟ ರೈತನ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ರಾಂಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಹಾಪುರ್‌ನಲ್ಲಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇತ್ತ ಪ್ರಿಯಾಂಕ ಗಾಂಧಿ ತಮ್ಮ ಕಾರಿನಿಂದ ಕೆಳಗಿಳಿದು ಪರಿಶೀಲನೆ ನಡೆಸಿದರು. ಪರಿಸ್ಥಿತಿ ಸುಧಾರಿಸಿದ ಬಳಿಕ ಕಾರಿನ ಕಡೆಗೆ ಬಂದ ಪ್ರಿಯಾಂಕ ಗಾಂಧಿ ಕಾರಿನ ಮುಂಭಾಗದ ಗಾಜಿನ ಮೇಲಿದ್ದ ದೂಳನ್ನು ಸ್ವಚ್ಛಗೊಳಿಸಿದ್ದಾರೆ.
ಈ ವೇಳೆ ಅಲ್ಲೇ ಇದ್ದ ಉತ್ತರ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಕೂಡ ಗಾಜು ಸ್ವಚ್ಛಗೊಳಿಸಿ ಪ್ರಿಯಾಂಕ ಅವರನ್ನು ಬಿಡುವಂತೆ ಕೇಳಿಕೊಂಡರು.
PublicNext
04/02/2021 01:11 pm