ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಲಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ದೆಹಲಿಯಲ್ಲಿ ಕಳೆದ 2 ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟವನ್ನು ನಟ-ನಟಿಯರು ಬೀದಿಗಿಳಿದು ಬೆಂಬಲಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ''ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.‌ ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ” ಎಂದು ಪ್ರಶ್ನಿಸಿದ್ದಾರೆ.

Edited By : Vijay Kumar
PublicNext

PublicNext

04/02/2021 02:21 pm

Cinque Terre

67.12 K

Cinque Terre

16

ಸಂಬಂಧಿತ ಸುದ್ದಿ