ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಲಪಾಡ್ ಹ್ಯಾರಿಸ್ ಗೆದ್ದರು ಸಿಗದ ಅಧ್ಯಕ್ಷ ಪಟ್ಟ : ಯೂತ್ ಕಾಂಗ್ರೆಸ್ ನಲ್ಲಿ ಭಿನ್ನಮತ

ಬೆಂಗಳೂರು: ಫೇಮ್ ಎಂಬ ಸಂಸ್ಥೆ ಮೂರು ಹಂತಗಳಲ್ಲಿ ಯುವ ಕಾಂಗ್ರೆಸ್ ಚುನಾವಣೆ ನಡೆಸಿದೆ. ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ 64,203 ಮತ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಅವರ ಮೇಲಿನ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಫೌಂಡೇಷನ್ ಫಾರ್ ಅಡ್ವಾನ್ಸ್ಡ್ ಮ್ಯಾನೇಜ್ ಮೆಂಟ್ ಆಫ್ ಎಲೆಕ್ಷನ್ಸ್ (ಫೇಮ್) ಸಮಿತಿಯು ಅವರ ಆಯ್ಕೆಯನ್ನು ಅನರ್ಹಗೊಳಿಸಿದೆ.

ಹೀಗಾಗಿ ನಲಪಾಡ್ ನಂತರ ಅತಿ ಹೆಚ್ಚು ಮತ ಗಳಿಸಿರುವ ರಕ್ಷಾ ರಾಮಯ್ಯ ಅವರನ್ನು ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಬೆಂಗಳೂರಿನ ಫರ್ಜಿ ಕಫೆಯಲ್ಲಿ ಶಾಸಕ ಎನ್ಎ ಹ್ಯಾರಿಸ್ ಪುತ್ರ ಮುಹಮ್ಮದ್ ನಲಪಾಡ್ ವಿದ್ವತ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿತ್ತು. ಪ್ರಕರಣದ ಅಡಿಯಲ್ಲಿ ನಲಪಾಡ್ ಜೈಲು ಶಿಕ್ಷೆಗೊಳಗಾಗಿ ಬಳಿಕ ಬಿಡುಗಡೆಗೊಂಡಿದ್ದರು.

ಇದಾದ ಬಳಿಕ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಗೋವಿಂದರಾಜ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಭೆಯೊಂದರಲ್ಲಿ ಪಕ್ಷದ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿತ್ತು. ಈ ಎಲ್ಲಾ ಕಾರಣಗಳು ಇದೀಗ ನಲಪಾಡ್ ರಾಜಕೀಯ ಭವಿಷ್ಯದ ಮೇಲೂ ಪರಿಣಾಮ ಬೀರಿದೆ.

ಕ್ರಿಮಿನಲ್ ಹಿನ್ನೆಲೆ ಕಾರಣ ನೀಡಿ ನಲಪಾಡ್ ಗೆ ಅಧ್ಯಕ್ಷ ಸ್ಥಾನ ನಿರಾಕರಣೆ ಮಾಡಿರುವ ಪಕ್ಷದ ನಡೆ ಇದೀಗ ಯುವ ಕಾಂಗ್ರೆಸ್ನಲ್ಲಿ ಭಿನ್ನಮತಕ್ಕೆ ಕಾರಣವಾಗಿದೆ. ಯೂತ್ ಕಾಂಗ್ರೆಸ್ ಬೈಲಾ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಕ್ರಿಮಿನಲ್ ಹಿನ್ನೆಲೆಯಲ್ಲಿ ಹೊಂದಿರಬಾರದು ಎಂದಿದೆ.

ಹೀಗಿದ್ದರೂ ನಲಪಾಡ್ ಸ್ಪರ್ಧೆಗೆ ಅವಕಾಶ ನೀಡಲಾಗಿತ್ತು. ರಾಜ್ಯಾದ್ಯಂತ ನಲಪಾಡ್ ಪ್ರಚಾರ ನಡೆಸಿ ಅತೀ ಹೆಚ್ಚು ಮತಗಳನ್ನುಗಳಿಸುವಲ್ಲಿ ಯಶಸ್ವಿ ಆಗಿದ್ದಾರೆ. ಆದರೆ ಯೂತ್ ಕಾಂಗ್ರೆಸ್ ನಿಯಮಾವಳಿ ಪ್ರಕಾರ ಫಲಿತಾಂಶವನ್ನು ಅನರ್ಹಗೊಳಿಸಲಾಗಿದೆ. ಆದರೆ ಇದು ಪಕ್ಷದಲ್ಲಿ ಭಿನ್ನತ ಸೃಷ್ಟಿಗೆ ಕಾರಣವಾಗಿದೆ. ಸದ್ಯ ಯಾರೂ ಬಹಿರಂಗ ಹೇಳಿಕೆ ನೀಡದೇ ಇದ್ದರೂ ಯುವ ಕಾಂಗ್ರೆಸ್ ನಲ್ಲಿ ಎರಡು ಬಣಗಳು ಸೃಷ್ಟಿಯಾಗಿದೆ.

Edited By : Nirmala Aralikatti
PublicNext

PublicNext

06/02/2021 11:41 am

Cinque Terre

71.93 K

Cinque Terre

4

ಸಂಬಂಧಿತ ಸುದ್ದಿ