ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ ಬ್ರೇಕಿಂಗ್: ರಾಜ್ಯದಲ್ಲಿ ಅನಧಿಕೃತ ಪಡಿತರ ಚೀಟಿ ರದ್ಧತಿಗೆ ಕಠಿಣ ಕ್ರಮ

ಬೆಳಗಾವಿ: ರಾಜ್ಯದಲ್ಲಿ ಅನಧಿಕೃತ ಪಡಿತರ ಚೀಟಿ ರದ್ಧತಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪಡಿತರ ರದ್ಧತಿ ಸಂಬಂಧ ಬೆಳಗಾವಿ ಜಿಲ್ಲೆಯಲ್ಲಿ ಸಮೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ತಹಶೀಲ್ದಾರ್, ಪಿಡಿಒ ಒಳಗೊಂಡ ಸಮಿತಿ ರಚಿಸಿ ಸರ್ವೆ ಮಾಡಲಾಗುವುದು. ಮಾರ್ಚ್ 31ರೊಳಗೆ ಅನಧಿಕೃತ ಕಾರ್ಡ್ ಗಳ ವರದಿ ಕೈ ಸೇರಲಿದೆ. ಬಳಿಕ ಅನಧಿಕೃತ ಪಡಿತರ ಚೀಟಿ ರದ್ಧುಗೊಳಿಸಲಾಗುವುದು. ಅನಧಿಕೃತ ಪಡಿತರ ಪತ್ತೆ ಸಮರ್ಪಕವಾಗದಿದ್ರೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಆಹಾರ ಭದ್ರತೆ ಯೋಜನೆಯಡಿ ಸ್ಥಳೀಯ ಆಹಾರ ವಿತರಣೆಗೆ ಆಧ್ಯತೆ ನೀಡಲಾಗುವುದು. ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ, ಕಡಲೆ, ಹೆಸರು ಬೇಳೆ ವಿತರಿಸಲಾಗುವುದು. ದಕ್ಷಿಣ ಕರ್ನಾಟಕದಲ್ಲಿ ಅಕ್ಕಿ, ರಾಗಿ ಕಡಲೆ, ಹೆಸರು ಬೇಳೆ ವಿತರಿಸಲಾಗುವುದು. ಎಪ್ರಿಲ್ ಒಂದರಿಂದ ಈ ಯೋಜನೆ ಜಾರಿಗೆ ತರಲು ಯೋಜಿಸಲಾಗಿದೆ. ಕಾಳಸಂತೆಗೆ ಅಕ್ಕಿ ಸರಬರಾಜು ಆಗುವುದು ಇದರಿಂದ ತಪ್ಪಲಿದೆ ಎಂದು ಹೇಳಿದರು.

ಪ್ರತಿವರ್ಷ ಪಂಜಾಬ್‌ನಿಂದ ಅಕ್ಕಿ ರಾಜ್ಯಕ್ಕೆ ಸರಬರಾಜು ಆಗುತ್ತಿತ್ತು. ಕರ್ನಾಟಕದಲ್ಲೇ ಸಾಕಷ್ಟು ಭತ್ತ ಬೆಳೆಯುತ್ತಿದ್ದು, ಇಲ್ಲೇ ಖರೀದಿಸುವ ಯೋಜನೆ ಇದೆ. ಕೇಂದ್ರದ ಆಹಾರ ನಾಗರಿಕ ಸರಬರಾಜು ಸಚಿವರ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುವುದು. ಇದರಿಂದ ಅನ್ನಭಾಗ್ಯ ಅಕ್ಕಿ ಕಾಳಸಂತೆಗೆ ಹೋಗುವುದನ್ನು ತಡೆಯಬಹುದು. ಕಾಳಸಂತೆಗೆ ಅಕ್ಕಿ ಸಾಗಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Edited By : Vijay Kumar
PublicNext

PublicNext

06/02/2021 07:08 pm

Cinque Terre

97.09 K

Cinque Terre

11

ಸಂಬಂಧಿತ ಸುದ್ದಿ