ಮಂಡ್ಯ: ರಾಜ್ಯದಲ್ಲಿ ಮುಂಬರುವ ವಿಧಾನಸಭೆಗೆ ಜೆಡಿಎಸ್ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ. ವಲಯವಾರು ವೀಕ್ಷಕರನ್ನ ನೇಮಕ ಮಾಡಿಕೊಂಡು ಪಕ್ಷ ಸಂಘಟನೆಗೆ ಮುಂದಾಗಿದೆ.
ಇದರ ಮಧ್ಯೆ ನಾಗಮಂಗಲದ ಮುಂದಿನ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಬಹಿರಂಗವಾಗಿಯೇ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಮೇಗೌಡ, ನಾನು ಜೆಡಿಎಸ್ ಪಕ್ಷದಲ್ಲೇ ಇದ್ದೀನಿ. ಮುಂದೆಯೂ ಇರ್ತೀನಿ. ಕೆಲವರು ನನ್ನನ್ನ ಕಳಿಸ್ಬೇಕು ಅಂತ ನೋಡ್ತಿದ್ದಾರೆ. ಆದ್ರೆ, ಪಕ್ಷ ಬಿಡುವ ಗಂಡು ನಾನಲ್ಲ ಎಂದು ಸ್ಪಷ್ಟಪಡಿಸಿದರು.
PublicNext
07/02/2021 06:10 pm