ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆಗಳ ಜಾರಿ ವಿರೋಧಿಸುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ''ಕೃಷಿ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಅನುಸರಿಸುತ್ತಿದೆ. ಈ ಹಿಂದೆ ಯುಪಿಎ ಸರ್ಕಾರ ಇದ್ದಾಗ ಕಾಂಗ್ರೆಸ್ ಇದೇ ಕೃಷಿ ಕಾಯ್ದೆಗಳನ್ನು ಜಾರಿ ಮಾಡಲು ಮುಂದಾಗಿತ್ತು. ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಈ ಕಾಯ್ದೆಯ ಪರ ಇದೇ ರಾಜ್ಯಸಭೆಯಲ್ಲಿ ಭಾಷಣ ಮಾಡಿದ್ದರು'' ಎಂದು ನೆನೆಪಿಸಿಕೊಟ್ಟರು.
'ಡಾ. ಮನಮೋಹನ್ ಸಿಂಗ್ ಅವರು ಹೇಳಿದ್ದನ್ನೇ ನಾನು ಮಾಡಿದ್ದೇನೆ. ಹೀಗಾಗಿ ವಿಪಕ್ಷಗಳು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಯವನ್ನು ಮೆಚ್ಚಿಕೊಳ್ಳಬೇಕು' ಎಂದು ಮಾರ್ಮಿಕವಾಗಿ ಹೇಳಿದರು.
PublicNext
08/02/2021 05:27 pm